ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಬಿಎಂಪಿ ಅಧಿಕಾರಿಗೊಳೊಂದಿಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ತರ್ತು ಸಭೆ ನಡೆಸಿದರು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನು ಸೃಷ್ಟಿಸಿದೆ. ಹೀಗಾಗಿ ಯಾವುದೇ ತೊಂದರೆ ಆಗದಂತೆ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಬಿಬಿಎಂಪಿ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಮಳೆಯಿಂದಾಗಿ ಹಾನಿಗೊಂಡ ಪ್ರದೇಶಗಳಿಗೆ ಶೀಘ್ರವಾಗಿ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಒದಗಿಸಬೇಕೆಂದು ಕಟ್ಟುನಿಟ್ಟಾಗಿ ಅಧಿಕಾರಿಗಳಿಗೆ ಸೂಚಿಸಲಾಯಿತು.
Kshetra Samachara
27/08/2022 06:49 pm