ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ
ಪರಿಣಾಮ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮೇ 18 ರಿಂದ ಇನ್ನೂ ಚುರುಕುಗೊಳ್ಳುತ್ತದೆ. ಇಂದು ಮಧ್ಯಾಹ್ನದ ನಂತರ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತ ಸೈಕ್ಲೋನ್ ಆಗಿ ಪರಿವರ್ತನೆ ಆಗಲಿದ್ದು, ಕಳೆದ 4 ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತಷ್ಟು ಚುರುಕು ಪಡೆದುಕೊಳ್ಳಲಿದೆ. ಇಂದು ಮಧ್ಯಾಹ್ನದಿಂದಲೇ ಸೈಕ್ಲೋನ್ ಎಫೆಕ್ಟ್ ರಾಜ್ಯದಲ್ಲಿ ಕಾಣಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಗುಡುಗು-ಸಿಡಿಲು ಸಹಿತ ಮಳೆಯಾಗುತ್ತಿದ್ದು, ಪ್ರಾಣ ಹಾನಿ ಸಂಭವಿಸುತ್ತಿವೆ.ಮಧ್ಯಾಹ್ನದ ನಂತರ ಶುರುವಾಗುವ ಮಳೆ ಜನರನ್ನು ಹೈರಾಣಾಗಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಸಂಜೆ ಮಳೆಯಾಗುತ್ತದೆ.ಬೆಂಗಳೂರು ಗ್ರಾಮಂತರ, ರಾಜಾಜಿ ನಗರ, ಯಶವಂತರಪುರ, ಜಾಲಹಳ್ಳಿ ಕ್ರಾಸ್, ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಾಗಲಿದ್ಯಂತೆ. ಇನ್ನೂ ಹೆಚ್ಚಾಗಿ ಮಳೆಯಾಗುವ ಪ್ರದೇಶಗಳಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚಿನ ಭಾರೀ ಮಳೆಯನ್ನು ಸೂಚಿಸುತ್ತದೆ. ಆದರೆ ಆರೆಂಜ್ ಅಲರ್ಟ್ ಎಂದರೆ 6 ಸೆಂ.ಮೀ ನಿಂದ 20 ಸೆಂ.ಮೀ ವರೆಗೆ ಅತಿ ಭಾರೀ ಮಳೆಯಾಗುತ್ತದೆ.
ಯೆಲ್ಲೋ ಅಲರ್ಟ್ ಎಂದರೆ 6 ಸೆಂ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ.
Kshetra Samachara
17/05/2022 05:33 pm