ಬೆಂಗಳೂರು: ಗ್ರಾಮೀಣ ಭಾಗದ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರ ಮತ್ತು ರಾಜ್ಯ ಸರಕಾರದ ಯೋಜನೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲು ʼವಿದ್ಯುತ್ ಅದಾಲತ್ʼ ಬೆಸ್ಕಾಂ ವ್ಯಾಪ್ತಿಯ̇ 8 ಜಿಲ್ಲೆಗಳ 104 ಹಳ್ಳಿಗಳಲ್ಲಿ ಶನಿವಾರ ನಡೆಯಲಿದೆ.
ಬೆಸ್ಕಾಂ ನ ಆಡಳಿತ ನಿರ್ದೇಶಕರಿಂದ ಹಿಡಿದು ಹಿರಿಯ ಅಧಿಕಾರಿಗಳು ವಿದ್ಯುತ್ ಅದಾಲತ್ ನಲ್ಲಿ ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲಿದ್ದಾರೆ. ಜತೆಗೆ ಕಾಲಮಿತಿಯಲ್ಲಿ ವಿದ್ಯುತ್ ಸಮಸ್ಯಗಳಿಗೆ ಪರಿಹಾರವನ್ನೂ ಒದಗಿಸಲಿದ್ದಾರೆ.
ಗ್ರಾಮೀಣ ಭಾಗದ ಜನರ ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎನ್ನುವ ಸದುದ್ದೇಶದಿಂದ ಪ್ರತಿ ತಿಂಗಳ ಮೂರನೇ ನಾಳೆ ವಿದ್ಯುತ್ ಅದಾಲತ್ ನಡೆಸಲು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಎಲ್ಲ ಎಸ್ಕಾಂಗಳಿಗೆ ಸೂಚಿಸಿದ್ದರು.
ವಿದ್ಯುತ್ ಸಂಬಂಧಿತ ಕುಂದು-ಕೊರತೆಗಳನ್ನು ಆಲಿಸಿ ಅದಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸುವುದು ಅಥವ ನಿಗದಿತ ಕಾಲಮಿತಿಯೊಳಗೆ ನಿವಾರಿಸುವ ಉದ್ದೇಶದಿಂದ ಎಲ್ಲ ಎಸ್ಕಾಂಗಳಲ್ಲಿ ಅದಾಲತ್ ಏಕಕಾಲದಲ್ಲಿ ನಡೆಯಲಿದೆ. ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ ಶನಿವಾರ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
Kshetra Samachara
17/06/2022 08:09 pm