ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಹಲವು ಪ್ರದೇಶಗಳಲ್ಲಿ‌ ಇಂದಿನಿಂದ ಮೂರು ದಿನ ವಿದ್ಯುತ್ ವ್ಯತ್ಯಯ

ಬೆಂಗಳೂರು- ಹೊಸದಾಗಿ ಕೇಬಲ್ ಅಳವಡಿಕೆ ಹಾಗೂ ವಿದ್ಯುತ್ ‌ಮಾರ್ಗಗಳ ನಿರ್ವಹಣೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳ ಬೇಕಾಗಿರುವ ಹಿನ್ನೆಲೆಯಲ್ಲಿ ಇಂದಿ ನಿಂದ ಜೂನ್ 29ರವರೆಗೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ​​ ವ್ಯತ್ಯಯ ಕಂಡುಬರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ.

ಇಂದು ಬೆಂಗಳೂರು ದಕ್ಷಿಣ ವಲಯದ ಪ್ರದೇಶಗಳು, ಕೋರಮಂಗಲದ 3, 4, 5 ಮತ್ತು 6 ಬ್ಲಾಕ್​ಗಳು, ಸಕ್ರಾ ಆಸ್ಪತ್ರೆ, ಔಟರ್ ರಿಂಗ್​ರೋಡ್​ನ ಸಲಾರ್‌ಪುರಿಯಾ ಸತ್ವ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್​​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಪೂರ್ವ ವಲಯದಲ್ಲಿ ಹಳೇ ಬೈಯಪ್ಪನಹಳ್ಳಿ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ್ ಪಾರ್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆಎಚ್ ಬಿ ಕಾಲೋನಿ, ಹಚಿನ್ಸ್ ರಸ್ತೆ, ವೀಲರ್ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಲಿಂಗರಾಜಪುರ, ಐಟಿಸಿ ಮುಖ್ಯರಸ್ತೆ, ಜೀವನಹಳ್ಳಿ ಮತ್ತು ಬಾಣಸವಾಡಿ ಮುಖ್ಯರಸ್ತೆ ಹಾಗೂ ಸುತ್ತಮುತ್ತಲು ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ವ್ಯತ್ಯಯವಾಗಲಿದೆ.

ಪಶ್ಚಿಮ ವಲಯದಲ್ಲಿ ಬಿಎಂಟಿಸಿ ಬಸ್ ಡಿಪೋ, ಶಂಕರಪ್ಪ ಎಸ್ಟೇಟ್ ಸೇರಿದಂತೆ ಉತ್ತರ ವಲಯದಲ್ಲಿ ಇಸ್ರೋ ಲೇಔಟ್ ಮತ್ತು ನ್ಯೂ ಬಿಇಎಲ್ ರಸ್ತೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್​ ಕಡಿತಗೊಳ್ಳಲಿದೆ.

ನಾಳೆ (ಮಂಗಳವಾರ ) ಬೆಂಗಳೂರು ಪೂರ್ವ ವಲಯದ ವ್ಯಾಪ್ತಿಯ ಪ್ರದೇಶಗಳಲ್ಲಿ ಎಚ್​ಆರ್​ಬಿಆರ್ ಲೇಔಟ್​ನ 2 ಮತ್ತು 3 ನೇ ಬ್ಲಾಕ್, ಕಾಮನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಮತ್ತು ಬಾಣಸವಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 11ರಿಂದ ಸಂಜೆ 5ರ ವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ನಾಡಿದ್ದು (ಬುಧವಾರ, ಜೂನ್ 29) ನಗರದ ದಕ್ಷಿಣ ವಲಯದಲ್ಲಿ ಕೋರಮಂಗಲ 2 ಬ್ಲಾಕ್, ಮಡಿವಾಳ ಟೋಟಲ್ ಮಾಲ್, ದವನಂ ಜ್ಯುವೆಲರ್ಸ್ ಕಟ್ಟಡ, ಮಡಿವಾಳ ಸಂತೆ, ಸಿದ್ಧಾರ್ಥ ಕಾಲೋನಿ, ಕೋರಮಂಗಲ 5 ಬ್ಲಾಕ್, ಇಂಡಸ್ಟ್ರಿಯಲ್ ಲೇಔಟ್​​ನಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ವ್ಯತ್ಯಯವಾಗಲಿದೆ. ಸಿಎಂಆರ್ ರಸ್ತೆ, ಎಚ್‌ಆರ್‌ಬಿಆರ್ ಲೇಔಟ್ 3 ಬ್ಲಾಕ್, ರಾಮಯ್ಯ ಲೇಔಟ್, ಕರವಳ್ಳಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಪೂರ್ವ ವಲಯದ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

Edited By : Nirmala Aralikatti
Kshetra Samachara

Kshetra Samachara

27/06/2022 02:07 pm

Cinque Terre

1.03 K

Cinque Terre

0

ಸಂಬಂಧಿತ ಸುದ್ದಿ