ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಭಾನುವಾರ (ಜು.31)ರಂದು ವಿಧಾನಸೌಧದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಭಾನುವಾರ (ಜು.31)ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮುಖ್ಯವಾಗಿ ವಿಧಾನಸೌಧದ ಸುತ್ತಮುತ್ತಲಿನ ಪ್ರದೇಶಗಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಪವರ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಭಾನುವಾರ (ಜು.31)ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೂ 66/11 ಕೆವಿ ಸ್ಟೇಷನ್ 35.5 ಎಂ.ವಿ.ಎ ಪರಿವರ್ತಕ -2ರಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ನಡೆಸುವುದರಿಂದ ವಿಧಾನಸೌಧ, ಎಂಎಸ್ ಬಿಲ್ಡಿಂಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ನಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಿದೆ.

ವಿಧಾಸೌಧ ಸುತ್ತ ಮುತ್ತಲಿನ ಎಲ್.ಹೆಚ್, ಬಿ.ಎಸ್‌.ಎನ್‌.ಎಲ್ ಬಿಲ್ಡಿಂಗ್, ಎಂಎಸ್ ಬಿಲ್ಡಿಂಗ್, ಕಾರ್ಪೋರೇಷನ್ ಕಚೇರಿ, ಕೆಪಿಎಸ್‌ಸಿ, ಸಿಐಡಿ, ಚೀಫ್ ಜಸ್ಟೀಸ್ ಮನೆ, ಮಿಲ್ಲರ್ಸ್ ರಸ್ತೆ, ವಸಂತ ನಗರ, ದಾಬಸ್ ಪೇಟೆ, ಚಿಕ್ ಬಜಾರ್ ರಸ್ತೆ, ಚಾಂದಿನಿ ಚೌಕ್ ರಸ್ತೆ, ಸ್ಲಾಟರ್ ಹೌಸ್ ರಸ್ತೆ, ತಿಮ್ಮಯ್ಯ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆ ತಿಳಿಸಿದೆ.

Edited By : Vijay Kumar
Kshetra Samachara

Kshetra Samachara

30/07/2022 11:00 pm

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ