ಬೆಂಗಳೂರು: ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿ ಕಾರ್ಯದಿಂದಾಗಿ ಶನಿವಾರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಆಗಸ್ಟ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸರ್ ಎಂ ವಿ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ರೆಸಿಡೆನ್ಸಿ ರಸ್ತೆ, ಆರ್ ಎಂ ಯು, ಲ್ಯಾವೆಲ್ಲಿ ರೆಸ್ತೆ, ವಿಟ್ಟಲ್ ಮಲ್ಯ ರಸ್ತೆ, ಚರ್ಚ್ ಸ್ಟ್ರೀಟ್, ಕಸ್ತೂರಿ ಬಾ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐಟಿಸಿ ಹೋಟೆಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದ್ದಾರೆ.
Kshetra Samachara
04/08/2022 11:13 pm