ಬೆಳಗಾವಿ : ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ವಿದ್ಯುತ್ ಇಲಾಖೆಯ ಕೆಲಸಗಾರ ಇಲಾಖೆ ಆವರಣದಲ್ಲಿಯೇ ನೇಣಿಗೆ ಶರಣಾದ ಘಟನೆ ನಡೆದಿದೆ.
ಗುತ್ತಿಗೆ ಆಧಾರದ ಮೇಲೆ ವಿದ್ಯುತ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಮುತ್ತಗಿ ಮೃತ ದುರ್ದೈವಿ. ವಿದ್ಯುತ್ ಕಂಬಗಳು ನೆಡುವ ಟ್ರ್ಯಾಕ್ಟರ್ ಗೆ ನೇಣು ಹಾಕಿಕೊಂಡ ಯುವಕನ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಇನ್ನು ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
12/09/2022 09:18 am