ಬೆಳಗಾವಿ: ಬೆಳಗಾವಿ ನಗರದಲ್ಲಿ ಸತತವಾಗಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಅವಾಂತರಕ್ಕೆ ಇದೀಗ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ.
ಕುಂದಾನಗರಿಯಲ್ಲಿ ಮುಂದುವರಿದ ಮಳೆಯ ಅಬ್ಬರಕ್ಕೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಬೃಹದಾಕಾರದ ಮರ ಬಿದ್ದು ಬೈಕ್ ಸವಾರ ರಾಕೇಶ್ ಸುನದಾಳ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದತ್ತ ತೆರಳುತ್ತಿದ್ದ ಬೈಕ್ ಸವಾರ, ಈ ವೇಳೆ ರಸ್ತೆಯ ಮೇಲೆ ಏಕಾಏಕಿ ಬಿದ್ದ ಬೃಹದಾಕಾರದ ಮರ ಕ್ಷಣಾರ್ಧದಲ್ಲಿ ವಾಹನ ಸವಾರ ಮೃತಪಟ್ಟಿದ್ದಾನೆ. ಮರದ ಅವಶೇಷಗಳಡಿ ಸಿಲುಕಿದ್ದ ಇಬ್ಬರು ಬೈಕ್ ಸವಾರರನ್ನು ಹೊರಗೆ ತೆಗೆಯಲು ಪೊಲೀಸರು ಕೂಡ ಹರಸಾಹಸ ಪಡುತ್ತಿದ್ದರು. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಉತ್ತರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
PublicNext
13/09/2022 10:58 am