ಬೆಳಗಾವಿ: ಆಳವಾದ ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿ ವ್ಯಕ್ತಿ ಒಬ್ಬ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮುಳ್ಳೂರ ಗ್ರಾಮದ ಹತ್ತಿರ ಗುಡ್ಡದ ಕೆರೆಯಲ್ಲಿ ನಡೆದಿದೆ. ಮೃತ ವ್ಯಕ್ತಿಗೆ ಈಜು ಬಾರದ ಕಾರಣ ಅಸುನೀಗಿದ್ದಾನೆ ಎಂದು ಹೇಳಲಾಗಿದೆ.
ಮೃತ ವ್ಯಕ್ತಿಯನ್ನು ಮುಳ್ಳೂರ ಗ್ರಾಮದ ಮಲ್ಲಿಕಾರ್ಜುನ ನಿಂಗಪ್ಪ ಅನವಾಲ (40) ಎಂದು ಗುರುತಿಸಲಾಗಿದ್ದು, ಎರಡು ಮಕ್ಕಳು ಹಾಗೂ ಹೆಂಡತಿಯನ್ನು ಅಗಲಿದ್ದಾರೆ. ಎತ್ತು ಮೈ ತೊಳೆಯಲು ಹೋದಾಗ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಹೊರಗೆ ತೆಗೆದು ಇದೀಗ ಮರಣೋತ್ತರ ಪರೀಕ್ಷೆಗೆ ಶವವನ್ನು ಸ್ಥಳೀಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
PublicNext
19/09/2022 05:41 pm