ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮ್ಯಾಕ್ಸಿಕ್ಯಾಬ್ ಲಾರಿ- ದ್ವಿಚಕ್ರ ವಾಹನದ ನಡುವೆ ಅಪಘಾತ; ಯುವಕ ಸಾವು

ಬೆಳಗಾವಿ: ದ್ವಿಚಕ್ರ ವಾಹನ ಹಾಗೂ ಮ್ಯಾಕ್ಸಿಕ್ಯಾಬ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಮೀಪದ ಬೋರಗಾಂವ ಪಟ್ಟಣದಲ್ಲಿ ನಡೆದಿದೆ.

ರಾಮಾ ಕೃಷ್ಣಾ ಸನದಿ (32) ಮೃತಪಟ್ಟ ಯುವಕ. ರಾಮಾ ಸನದಿ ಇವರು ಇಚಲಕರಂಜಿಯಲ್ಲಿ ತಮ್ಮ ಕೆಲಸ ಮುಗಿಸಿಕೊಂಡು ಬೋರಗಾಂವ ಪಟ್ಟಣದ ತಮ್ಮ ಮನೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಮ್ಯಾಕ್ಸಿಕ್ಯಾಬ್ ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ರಾಮಾ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಡಿವೈಎಸ್‌ಪಿ ಬಸವರಾಜ ಯಲಿಗಾರ, ಸದಲಗಾ ಪಿ.ಎಸ್.ಐ. ಎಚ್‌. ಭರತಗೌಡಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಸದಲಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Edited By : Vijay Kumar
PublicNext

PublicNext

28/09/2022 12:54 pm

Cinque Terre

10 K

Cinque Terre

0

ಸಂಬಂಧಿತ ಸುದ್ದಿ