ಬೆಳಗಾವಿ: ಯರಗಟ್ಟಿ ಸಮೀಪದ ಮಾಡಮಗೇರಿ ಗ್ರಾಮದಲ್ಲಿ ಭಾರಿ ಮಳೆಗೆ ಮಹಾದೇವ ಲಕ್ಷ್ಮಪ್ಪ ಬಾಗಿಲದ ಇವರಿಗೆ ಸೇರಿದ ಮನೆ ಕುಸಿದು ಮಗು ಪ್ರಜ್ವಲ್(5) ಹಾಗೂ ತಾಯಿ ಯಲ್ಲವ್ವ ಮಹಾದೇವ ಬಾಗಿಲದ (40) ಸಾವನಪ್ಪಿದ ಘಟನೆ ನಡೆದಿದೆ.
ಸ್ಥಳಕ್ಕೆ ತಹಶೀಲ್ದಾರ್ ಮಹಾಂತೇಶ ಮಠದ, ಸಿಪಿಐ ಮೌನೇಶ್ವರ ಮಾಲಿಪಾಟೀಲ, ಪಿಎಸ್ಐ ಬಸನಗೌಡ ನಿರ್ಲಿ, ಎಎಸ್ಐ ವಾಯ್ ಎಂ. ಕಡಕೋಳ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
01/10/2022 09:48 pm