ಬೆಳಗಾವಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಬೆಳಗಾವಿ-ಬಾಗಲಕೋಟೆ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಇನ್ನು ಕಾರು ಚಾಲಕ ರಂಗಪ್ಪ ಪಾಟೀಲ್ (30) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಗೌಡಪ್ಪಗೌಡ ಅಮರೇಗೌಡ, ವೀರಭದ್ರಗೌಡ ಡಬಿ ಸ್ಥಿತಿ ಗಂಭೀರವಾಗಿದೆ.
ಸದ್ಯ ಈ ಇಬ್ಬರು ಗಾಯಾಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕ್ರೇನ್ ಸಹಾಯದಿಂದ ಕಾರಿನಲ್ಲಿದ್ದವರನ್ನ ಪೊಲೀಸರು ಹೊರ ತೆಗೆದಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
PublicNext
06/10/2022 11:35 am