ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಉದ್ಯಮಶೀಲತೆ ಪ್ರೋತ್ಸಾಹಿಸಲು ಭರತೇಶ ಶಿಕ್ಷಣ ಸಂಸ್ಥೆಯ ದಿಟ್ಟ ಹೆಜ್ಜೆ- ಡಾ. ವೀಣಾ ಕರ್ಚಿ

ಬೆಳಗಾವಿ: ಸಂಶೋಧನಾ ಮತ್ತು ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದೊಂದಿಗೆ ಭರತೇಶ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿಯು ಬೆಳಗಾವಿ ಸ್ಟಾರ್ಟ್ ಅಪ್ಸ್ ಅಸೋಸಿಯೇಷನ್‌ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು, ಸೋಮವಾರ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಭರತೇಶ ಇಂಜಿನಿಯರಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ವೀಣಾ ಕರ್ಚಿ ತಿಳಿಸಿದರು.

ನಗರದ ಭರತೇಶ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬದಲಾಗುತ್ತಿರುವ ಜಗತ್ತಿನಲ್ಲಿ ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ನೆರವು ಕಲ್ಪಿಸುವ ಹಾಗೂ ಸಂಶೋಧನೆ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದರು.

20ಕ್ಕೂ ಹೆಚ್ಚು ಉದ್ಯಮಗಳು ಬೆಳಗಾವಿ ಸ್ಟಾರ್ಟ್ ಅಪ್ಸ್ ಅಸೋಸಿಯೇಷನ್ ನಲ್ಲಿ ಇದ್ದು, ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣ ಹಾಗೂ ಉದ್ಯೋಗ ಅವಕಾಶಗಳು ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮಷೀನ್ ಲರ್ನಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್, ಇನ್ಫೋರ್ಮೆಶನ್ ಸೈನ್ಸ್, ಈ 4 ವಿಷಯಗಳಲ್ಲಿ ವಿದ್ಯಾರ್ಥಿಗಳು ಪದವಿ ಪಡೆದ ನಂತರ ಅವರ ಉದ್ಯಮಶೀಲತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಸಂಶೋಧನೆ ಮತ್ತು ಮಾರ್ಗದರ್ಶನ ದೊರೆಯಲಿದೆ ಎಂದರು.

ಬೆಳಗಾವಿ ಸ್ಟಾರ್ಟ್ ಅಪ್ಸ್ ಅಸೋಶಿಯೇಷನ್ ಉದಯೋನ್ಮುಖ ಉದ್ಯಮಗಳಿಗೆ ಪ್ರಮುಖ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತಿದೆ. ಆರ್ಥಿಕ ಬೆಳವಣಿಗೆ ಹಾಗೂ ಸ್ಥಳೀಯ ಉದ್ಯಮಶೀಲತೆಯನ್ನು ಬೆಳೆಸಲು ಹಲವು ಕಾರ್ಯ ಚಟುವಟಿಕೆಗಳನ್ನು ಇಲ್ಲಿ ನಡೆಸುತ್ತಿದೆ ಎಂದರು.

Edited By : Manjunath H D
PublicNext

PublicNext

05/08/2024 10:47 pm

Cinque Terre

35.97 K

Cinque Terre

0

ಸಂಬಂಧಿತ ಸುದ್ದಿ