ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಶಿರಗುಪ್ಪಿ ಶುಗರ್ಸ್ ಪ್ರಸಕ್ತ ಹಂಗಾಮಿಗೆ 2850 ರೂ ಘೋಷಣೆ

ಅಥಣಿ : ಪ್ರಸಕ್ತ ಹಂಗಾಮಿನಲ್ಲಿ ಕಾಗವಾಡ ಪಟ್ಟಣದ ಶಿರಗುಪ್ಪಿ ಸಕ್ಕರೆ ಕಾರ್ಖಾನೆಯು ಪ್ರತಿ ಟನ್ ಕಬ್ಬಿಗೆ 2850 ರೂ. ದರ ನೀಡಲು ನಿರ್ಧರಿಸಲಾಗಿದೆ ಎಂದು ಶಿರಗುಪ್ಪಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕಲ್ಲಪ್ಪಣ್ಣ ಮಗೆಣ್ಣವರ ಹೇಳಿದರು.

ಅವರು ನಿನ್ನೆ ಕಾಗವಾಡ ಪಟ್ಟಣದ ಶಿರಗುಪ್ಪಿ ಶುಗರ ವರ್ಕ್ಸ ಸಕ್ಕರೆ ಕಾರ್ಖಾನೆಯ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಮಾತನಾಡುತ್ತಾ ಶಿರಗುಪ್ಪಿ ಸಕ್ಕರೆ ಕಾರ್ಖಾನೆಯ 11 ನೇ ಕಬ್ಬು ನುರಿಸುವ ಹಂಗಾಮು ಇದಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿಗದಿ ಪಡಿಸಿರುವ ಎಫ್.ಆರ್.ಪಿ. ದರಕ್ಕಿಂತ ಹೆಚ್ಚಾಗಿ ಪ್ರತಿ ಟನ್ ಕಬ್ಬಿಗೆ 2850 ರೂ. ದರ ನೀಡಲು ನಿರ್ಧರಿಸಲಾಗಿದ್ದು, ಕಬ್ಬು ಬೆಳೆಗಾರರು ಕಾರ್ಖಾನೆಗೆ ಕಬ್ಬು ಪೂರೈಸಿದ 15 ದಿನಗಳಲ್ಲಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುವುದು, ಆದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ರೈತರು ಕಾರ್ಖಾನೆಗೆ ಕಬ್ಬು ಪೂರೈಸಿ ಸಹಕರಿಸುವಂತೆ ಮನವಿ ಮಾಡಿಕೊಂಡರು.

ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕರಾದ ಅರುಣ ಫರಾಂಡೆ ಮಾತನಾಡಿ ಸಕ್ಕರೆ ಕಾರ್ಖಾನೆಗಳ ಉಪ ಉತ್ಪಾದನೆಗಳು ಹೆಚ್ಚಾದಾಗ ಮಾತ್ರ ರೈತರು ಬೆಳೆದ ಕಬ್ಬಿಗೆ ಯೋಗ್ಯ ದರ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈ ವೇಳೆ ಕಾರ್ಯಕಾರಿ ಸಂಚಾಲಕರಾದ ಪ್ರವೀಣ ದೊಡ್ಡಣ್ಣವರ, ಡಾ. ರಮೇಶ ದೊಡ್ಡಣ್ಣವರ, ಪೃಥ್ವಿ ದೊಡ್ಡಣ್ಣವರ, ಮಹಾವೀರ ಸುಗಣ್ಣವರ, ಮಹಾವೀರ ಬಿರನಾಳೆ, ಬಿ.ಡಿ.ಯಳಗೂಡ, ಕೌತುಕ ಮಗೆಣ್ಣವರ, ವೀರೇಂದ್ರ ಜಾಡರ ಸೇರಿದಂತೆ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

10/10/2022 07:41 am

Cinque Terre

6.84 K

Cinque Terre

0

ಸಂಬಂಧಿತ ಸುದ್ದಿ