ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಆರ್‌ಸಿಯುನಿಂದ ನಟ ರಮೇಶ್ ಅರವಿಂದ್‌ಗೆ ಗೌರವ ಡಾಕ್ಟರೇಟ್

ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಹನ್ನೆರೆಡು ವಸಂತಗಳನ್ನು ಪೂರೈಸಿರುವ ಸಂದರ್ಭದಲ್ಲಿ 10ನೇ ವಾರ್ಷಿಕ ಘಟಿಕೋತ್ಸವ ಸೆ.14ರಂದು ನಡೆಯಲಿದೆ ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ ರಾಮಚಂದ್ರಗೌಡ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲೂಕಿನ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುತ್ತಾರೆ. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಸಿ.ಎನ್. ಅಶ್ವಥ್ ನಾರಾಯಣ್, ಆಂಧ್ರಪ್ರದೇಶದ ವಿಜಯನಗರಂನ ಕೇಂದ್ರೀಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ. ಕಟ್ಟಿಮನಿ ಘಟಿಕೋತ್ಸವದ ಭಾಷಣ ನಡೆಸಿಕೊಡಲಿದ್ದಾರೆ.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ "ಗೌರವ ಡಾಕ್ಟರೇಟ್" ಪದವಿಯನ್ನು ಪ್ರದಾನ ಮಾಡಲಿದ್ದು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ಹೆಸರಾಂತ ಚಿತ್ರನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದರು. ಇನ್ನೂ 43,607 ವಿದ್ಯಾರ್ಥಿಗಳು ಪದವಿ, 11 ಸುವರ್ಣ ಪದಕಗಳು, 48ಪಿಹೆಚ್ ಡಿ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಸ್ಲಗ್: ಅರವಿಂದ್‌ಗೆ ಗೌರವ ಡಾಕ್ಟರೇಟ್

Edited By : Shivu K
PublicNext

PublicNext

13/09/2022 08:26 am

Cinque Terre

36.69 K

Cinque Terre

0