ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಅಣ್ಣನೊಂದಿಗೆ ಗಾಳಿಪಟ ಹಾರಿಸುವಾಗ ಬಿಲ್ಡಿಂಗ್ ಮೇಲಿಂದ ಬಿದ್ದು 11ವರ್ಷದ ತಮ್ಮ ಸಾವು..!

ಬೆಳಗಾವಿ: ಗಾಳಿಪಟ ಹಾರಿಸುವಾಗ ಆಯತಪ್ಪಿ ಬಿಲ್ಡಿಂಗ್‌ ಮೇಲಿಂದ ಬಿದ್ದು 11ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ಉಜ್ವಲ್ ನಗರದ ಸೆಕೆಂಡ್ ಕ್ರಾಸ್ ತಿರಂಗಾ ಕಾಲೋನಿಯ ಅರ್ಮಾನ್ ದಫೆದಾರ್(11) ಮೃತ ಬಾಲಕ. ನಿನ್ನೆ ಅಶೋಕ ನಗರದ ತಮ್ಮ ಸಂಬಂಧಿಕರ ಮನೆಗೆ ಕುಟುಂಬಸ್ಥರ ಜೊತೆಗೆ ಬಾಲಕ ಬಂದಿದ್ದನು. ಈ ವೇಳೆ ನಾಸ್ಟಾ ಮಾಡಿದ ಬಳಿಕ ತನ್ನ ಅಣ್ಣನ ಜೊತೆಗೆ ಗಾಳಿಪಟ ಹಾರಿಸಲು ಬಿಲ್ಡಿಂಗ್ ಟೆರಸ್ ಮೇಲೆ ಹೋಗಿದ್ದಾನೆ. ಈ ವೇಳೆ ಗಾಳಿಪಟ ಹಾರಿಸುವಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ,ಚಿಕಿತ್ಸೆ ಫಲಕಾರಿಯಾಗದೇ ಅರ್ಮಾನ್ ಇಂದು ಕೊನೆಯುಸಿರೆಳೆದಿದ್ದಾನೆ.

ನಂತರ ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಆಸ್ಪತ್ರೆಯವರು ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಮಗನ ಕಳೆದುಕೊಂಡ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

06/10/2022 08:34 pm

Cinque Terre

23.58 K

Cinque Terre

0

ಸಂಬಂಧಿತ ಸುದ್ದಿ