ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 19ವರ್ಷದ ಯುವತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿರುವ ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಮೃತ ಯುವತಿ ಬೆಂಗಳೂರಿನಲ್ಲಿ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಯುವತಿ ಕಾಲ್ ಸೆಂಟರ್ ನಲ್ಲಿ ಕೆಲಸಕ್ಕೆ ಸೇರಿದ್ದರು.
ಏಕಾಏಕಿ ನಿನ್ನೆ ತಬಸ್ಸುಮ್‌ಳನ್ನು ಅಪರಿಚಿತ ವ್ಯಕ್ತಿಯೊಬ್ಬರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಎಂಎಲ್‌ಸಿ ಮಾಡ್ತೀವಿ ಅನ್ನುತ್ತಿದ್ದಂತೆ ಯುವತಿಯ ಮೊಬೈಲ್‌ನೊಂದಿಗೆ ಅಪರಿಚಿತ ಯುವಕ ಎಸ್ಕೇಪ್ ಆಗಿದ್ದಾನೆ. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ ವೇಳೆ ಯುವತಿ ನಿತ್ರಾಣ ಸ್ಥಿತಿಯಲ್ಲಿದ್ದರು. ಹೀಗಾಗಿ ತಬಸ್ಸುಮ್ ಳನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ತಬಸ್ಸುಮ್ ತಲೆಯ ಹಿಂಬದಿಗೆ ಗಾಯದ ಗುರುತು ಪತ್ತೆಯಾಗಿದೆ.
ಅಷ್ಟೇ ಅಲ್ಲದೇ ಮೈಯಲ್ಲಿ ಸಿಗರೇಟ್‌ನಿಂದ ಸುಟ್ಟಿರುವ ಗಾಯದ ಗುರುತುಗಳಿದ್ದು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಇದಲ್ಲದೇ ಸಿಬಿಐ ತನಿಖೆ ಮಾಡಬೇಕು. ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಈ ಕುರಿತು ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
13/10/2022 04:35 pm