ಬೆಳಗಾವಿ: ಎರಡು ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಪಕ್ಕದಲ್ಲಿ ಹಾಯ್ದು ಹೋಗಿರುವ ಮಲಪ್ರಭಾ ನದಿಗೆ ಹಾರಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮದ ರುದ್ರವ್ವ ಬಸವರಾಜ ಬನ್ನೂರ(30) ಮೃತ ಮಹಿಳೆ. ತನ್ನ ಎರಡು ವರ್ಷದ ಗಂಡುಮಗುವಿನೊಂದಿಗೆ ನದಿಗೆ ಹಾರಿದ್ದಾರೆ.
ಘಟನಾ ಸ್ಥಳಕ್ಕೆ ರಾಮದುರ್ಗ ಪೊಲೀಸರು ಹಾಗೂ ಅಗ್ನಿಶಾಮಕದ ಸಿಬ್ಬಂದಿ ಆಗಮಿಸಿದ್ದು ತಾಯಿ ಮತ್ತು ಮಗುವಿನ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
PublicNext
17/09/2022 09:43 pm