ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಈ ಪಟ್ಟಣದಲ್ಲಿ ಬೈಕ್ ಕಳ್ಳರು ಬಂದಿದ್ದಾರೆ ಹುಷಾರ್..!

ಬೈಲಹೊಂಗಲ: ಅಂಗಡಿ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನವಾಗಿರುವ ಘಟನೆ ಪಟ್ಟಣದ ಬಸ್ ನಿಲ್ದಾಣದ ಬಳಿಯ ಕೆನರಾ ಬ್ಯಾಂಕ್ ಹತ್ತಿರ ನಡೆದಿದೆ, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿ ಮಾಲೀಕ ವಿಜಯಕುಮಾರ ರಾಜಗೋಳಿ ಎಂಬುವರಿಗೆ ಸೇರಿರುವ ಬಜಾಜ್ ಕಂಪನಿ ಪ್ಲಾಟಿನಾ ಬೈಕ್ ಅನ್ನು ಸೆ.17 ರಂದು ಸಂಜೆ ವೇಳೆ ಕಳ್ಳತನ ಮಾಡಿಕೊಂಡು ಪರಾರಿ ಆಗಿದ್ದು ಕಳ್ಳತನ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇನ್ನೂ ಖದೀಮರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ‌. ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Edited By : Manjunath H D
PublicNext

PublicNext

22/09/2022 09:24 pm

Cinque Terre

40.48 K

Cinque Terre

0

ಸಂಬಂಧಿತ ಸುದ್ದಿ