ಬೆಳಗಾವಿ: ದುಷ್ಕರ್ಮಿಗಳ ಗುಂಪೊಂದು ಬಾಲಕನ ಮೇಲೆ ದಾಳಿ ನಡೆಸಿ ಚಾಕು ಇರಿದ ಘಟನೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಸೋಮವಾರ ಮಧ್ಯ ರಾತ್ರಿ ನಡೆದಿದೆ.
ಬೆಳಗಾವಿಯ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್ (15) ಬೆನ್ನಿಗೆ ಚೂರಿ ಇರಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತತಕ್ಷಣ ಫರಾನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿರುವ ಜನರನ್ನು ಎಪಿಎಂಸಿ ಪೊಲೀಸರು ಚದುರಿಸಿದರು. ಆಸ್ಪತ್ರೆ ಮುಂದೆ ಜಮಾವಣೆಗೊಂಡಿದ್ದ ಜನರು ಗದ್ದಲ ಮಾಡಲು ಮುಂದಾದಾಗ ಪೊಲೀಸರು ಲಾಠಿ ಹಿಡಿದು ಕುಟುಂಬಸ್ಥರು ಹಾಗೂ ಸಂಬಂಧಿಕರನ್ನ ಹೊರಗೆ ಕಳುಹಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಇನ್ನು ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣಗೊಂಡಿದ್ದು, ಡಿಸಿಪಿ ಸ್ನೇಹಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಜಮಾಗೊಂಡವರು ಅಲ್ಲಿಂದ ಪಲಾಯನವಾದರು. ಈ ಘಟನೆಯ ಬಳಿಕ ಎಪಿಎಂಸಿ ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಬಲ್ಲ ಮೂಲಗಳ ಪ್ರಕಾರ, ದಾರಿ ಬಿಡಿಲಿಲ್ಲವೆಂದು ಅನ್ಯ ಕೋಮಿನ ದುಷ್ಕರ್ಮಿಗಳು ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೇನು ನವರಾತ್ರಿಯ ಆರಂಭದ ಮೊದಲ ದಿನವೇ ಕೋಮ ಗಲಭೆಯಂತಹ ಘಟನೆ ನಡೆದಿದ್ದರಿಂದ ಸಿಟಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
PublicNext
27/09/2022 08:49 am