ಬೆಳಗಾವಿ: ಒಂದು ಬೈಕ್ ಹಾಗೂ ಮೂರು ಕಾರಗಳ ನಡುವೆ ಭೀಕರ ಅಪಘಾತ ಸಂಭವಿಸಿ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಬಳಿ ನಡೆದಿದೆ.
ಬೈಕ್ ಮೇಲೆ ಸಂಚರಿಸುತ್ತಿದ್ದ ಬೈಲಹೊಂಗಲ ತಾಲೂಕಿನ ಭಾರತಿ ಪೂಜೇರಿ (28) ಹಾಗೂ ವೇದಾಂತ ಪೂಜೇರಿ (6) ಮೃತ ದುರ್ದೈವಿಗಳು. ಭಾರತಿ ಪೂಜೇರಿ ಪತಿ ಅನಿಲ ಪೂಜೇರಿ ಗಂಭೀರ ಹಾಗೂ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೋಲಿಸ್ ಇನ್ಸ್ಪೆಕ್ಟರ್ ಮಹಮ್ಮದ್ ರಫಿಕ್ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
09/10/2022 11:00 pm