ಬೆಳಗಾವಿ: ಸಾಲಭಾದೆ ತಾಳಲಾರದೆ ವ್ಯಕ್ತಿಯೋರ್ವ ಟವರ್ ಏರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಂಜಯ್ ಪಾಟೀಲ್(35) ಎಂಬ ವ್ಯಕ್ತಿ ಟವರ್ ಏರುವ ಸಮಯದಲ್ಲಿ ಆಯ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.
ಕೂಡಲೇ ತೀವ್ರವಾಗಿ ಗಾಯಗೊಂಡಿದ್ದ ಸಂಜಯ್ ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಂಜಯ್ ಬ್ಯಾಂಕ್ ಹಾಗೂ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
13/10/2022 09:05 am