ಅಥಣಿ: ದೇಶಕ್ಕೆ ಮಹತ್ತರ ಕೊಡುಗೆ ನೀಡಿದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ನಿಮಿತ್ತ ಎಂಜಿನಿಯರ್ಸ್ ದಿನಾಚರಣೆಯನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯವಾಗಿ ನಡೆಸಲಾಗುತ್ತದೆ.
ಆದರೆ, ಅಥಣಿ ಪಟ್ಟಣದ ಘಟಪ್ರಭಾ ಎಡದಂಡೆ ಕಾಲುವೆ ಹಾಗೂ ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರ ಕಚೇರಿ ಮತ್ತು ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕಚೇರಿಗಳಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸದೆ ನಿರ್ಲಕ್ಷ್ಯ ತೋರಲಾಗಿದೆ!
ಈ ಬಗ್ಗೆ ಮಾಧ್ಯಮದವರು ವಿಚಾರಿಸುತ್ತಿದ್ದಂತೆಯೇ ಸೆ.15ರ ಸಂಜೆ 5.15ಕ್ಕೆ ತರಾತುರಿಯಲ್ಲಿ ಒಂದು ಕಚೇರಿಯಲ್ಲಿ ಪೋಟೋ ಇಟ್ಟು, ನಮನ ಸಲ್ಲಿಸಿದ್ದು, ಇನ್ನೊಂದು ಕಚೇರಿಯಲ್ಲಿ ಮೇಲಾಧಿಕಾರಿಗಳು ಇಲ್ಲದ ಕಾರಣ ಒಡ್ಡಿ ದಿನಾಚರಣೆ ಕೈ ಬಿಡುವ ಮೂಲಕ ಸಿಬ್ಬಂದಿ ಬೇಜವಾಬ್ದಾರಿ ತೋರಿಸಿದ್ದಾರೆ. ಈ ಬಗ್ಗೆತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂಬ ಸಾರ್ವಜನಿಕರು ಆಗ್ರಹಿಸಿದ್ದಾರೆ.
PublicNext
16/09/2022 01:14 pm