ಹುಕ್ಕೇರಿ: ಮಹಿಳೆಯರಿಗೆ ಗೌರವ ಕೊಡದೇ ಯಾವ ದೇವಸ್ಥಾನಕ್ಕೂ ಹೋದರೂ ದೇವರು ಒಲಿಯುವುದಿಲ್ಲ. ದೇವಿಯ ಅವತಾರವಾಗಿರುವ ಮನೆಯಲ್ಲಿನ ಹೆಣ್ಣು ಮಕ್ಕಳನ್ನು ಗೌರವಿಸಿದರೆ ಮಾತ್ರ ದೇವರು ಒಲಿಯುತ್ತಾನೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆಯುತ್ತಿದ್ದ ಹಿರೇಮಠದ ದಸರಾ ಉತ್ಸವ ಈ ಬಾರಿ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸರಳಾ ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಗಳು, 9 ದಿನಗಳ ಕಾಲ ನಡೆಯುತ್ತಿದ್ದ ಹಿರೇಮಠ ದಸರಾ ಉತ್ಸವವನ್ನು ಕ್ಷೇತ್ರದ ಶಾಸಕ ಹಾಗೂ ಹಿರಿಯ ಸಚಿವ ಉಮೇಶ್ ಕತ್ತಿ ನಿಧನದಿಂದ ಸರಳವಾಗಿ ಆಚರಣೆ ನಡೆಸಲು ನಿರ್ಧರಿಸಲಾಗಿದೆ.
ಶ್ರೀಮಠದ ಹಿಂದೆ ಹಾಕಿರುವ ಸರಳ ವೇದಿಕೆಯಲ್ಲಿ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ಮಾಡಿ ಚಂಡಿಕಾ ಯಾಗ ಮಾಡಿ ಆಚರಣೆ ಮಾಡಲಾಗುತ್ತಿದೆ. ಪ್ರತಿವರ್ಷ ಒಬ್ಬ ಸಾಧಕರ ಸಾಧನೆಯನ್ನು ಗುರುತಿಸಿ ಅವರಿಗೆ ಶ್ರೀಮಠದಿಂದ ರೇಣುಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು. ಆದರೆ ಈ ಬಾರಿ ಉಮೇಶ್ ಕತ್ತಿಯವರ ಅಕಾಲಿಕ ನಿಧನದಿಂದ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಹಾಗೂ ಲೋಕ ಕಲ್ಯಾಣಕ್ಕಾಗಿ 9 ದಿನಗಳ ಕಾಲ ಚಂಡಿಕಾ ಯಾಗ ಆಯೋಜಿಸಲಾಗಿದೆ ಎಂದರು.
PublicNext
26/09/2022 05:40 pm