ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಅಕ್ಟೋಬರ್ 15 ರಂದು ಡಾ ಪ್ರಭಾಕರ ಕೋರೆ ಅದ್ದೂರಿ ಅಮೃತ ಮಹೋತ್ಸವ

ಬೆಳಗಾವಿ: ಬರುವ 15 ಅಕ್ಟೋಬರ್ ಶನಿವಾರ ಬೆಳಗಾವಿ ಜೀರಗೆ ಸಭಾಂಗಣದಲ್ಲಿ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ನಡೆಯಲಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ, ಕೆಎಲ್ ಇ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು. ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕೆಎಲ್ಇ ಸಂಸ್ಥೆ ದಶಮಾನದ ಹೆಮ್ಮೆಯ ಸಂಸ್ಥೆ. ಕೆಎಲ್ ಇ ಸಂಸ್ಥೆಯನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡಯೊಯ್ದಿರುವ ಡಾ. ಪ್ರಭಾಕರ ಕೋರೆ ಅವರ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಜಿ ಸಚಿವ ಆರ್. ವಿ.ದೇಶಪಾಂಡೆ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಮಾಜಿ ಸಚಿವ ಡಾ. ಶ್ಯಾಮನೂರು ಶಿವಶಂಕರಪ್ಪ ಸೇರಿದಂತೆ ಹಿರಿಯ ಮತ್ಸದಿಗಳು ಆಗಮಿಸಲಿದ್ದಾರೆ ಎಂದರು.

ಡಾ. ಪ್ರಭಾಕರ ಕೋರೆಯವರ ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಚಿಕ್ಕೋಡಿಯಲ್ಲಿ ಕೃಷಿ ಮೇಳ, ನವೆಂಬರ್ 11 ರಂದು ನಾನಗನೂರು ಸ್ವಾಮೀಜಿಯ ನೇತೃತ್ವದಲ್ಲಿ ನಾಡಿನ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿವೆ ಎಂದರು.

ರೈತರ ಬದುಕಿನಲ್ಲಿ ಆಶಾ ಕಿರಣ ಮುಡಿಸಿ ಸುಮಾರು 3,000 ರೈತ ಕುಟುಂಬಗಳಿಗೆ ದಾರಿ ದೀಪ ತೋರಿಸಿದವರು ಡಾ. ಪ್ರಭಾಕರ ಕೋರೆ ಅವರು. ಕೋರೆ ಅಮೃತ ಸಮಿತಿಯ ನಿರ್ಣಯದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಯುವ ಜನಾಂಗಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಡಾ. ಪ್ರಭಾಕರ ಕೋರೆ ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸುವುದು ಅಮೃತ ಮಹೋತ್ಸವದಲ್ಲಿ ನೆನೆಯುವುದು ಅತ್ಯಗತ್ಯವಾಗಿದೆ ಎಂದರು.

ಅಮೃತ ಮಹೋತ್ಸವಕ್ಕೆ ಆಗಮಿಸುವ ಡಾ. ಪ್ರಭಾಕರ ಕೋರೆ ಅವರ ಅಭಿಮಾನಿಗಳಿಗೆ ಆರು ಸ್ಥಳದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಚಿಕ್ಕೋಡಿ ಭಾಗದ ಜನರಿಗೆ ಮುಕ್ತಿಮಠ, ಗೋಕಾಕ ಜನರಿಗೆ ಕಣಬರಗಿಯ ಸಂಕಲ್ಪ ಗಾಡ್೯ನ, ಹುಬ್ಬಳ್ಳಿ, ಧಾರವಾಡ ಜನರಿಗೆ ಪ್ರತ್ಯೇಕ ಕಡೆಗಳಲ್ಲಿ ಬೋಜನ ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಕೆಎಲ್ ಇ ಅಧ್ಯಕ್ಷ, ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಸಮಿತಿಯ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ, ಶಾಸಕ ಅನಿಲ್ ಬೆನಕೆ, ಎಂ.ಬಿ.ಜೀರಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

13/10/2022 03:57 pm

Cinque Terre

31.3 K

Cinque Terre

1

ಸಂಬಂಧಿತ ಸುದ್ದಿ