ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೃಹತ್ ಮರ ಬಿದ್ದು ಯುವಕ ಸಾವು-ತಕ್ಷಣವೇ 5 ಲಕ್ಷ ಪರಿಹಾರ ಬಿಡುಗಡೆ: ಡಿಸಿ ನಿತೇಶ್ ಪಾಟೀಲ

ಬೆಳಗಾವಿ: ನಗರದ ಆರ್.ಟಿ.ಓ. ವೃತ್ತದ ಸಮೀಪ ಬೃಹತ್ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ ಯುವಕನ ವಾರಸುದಾರರಿಗೆ ತಕ್ಷಣವೇ ಐದು ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ತಾಲ್ಲೂಕು ತುಮ್ಮರಗುದ್ದಿ ಗ್ರಾಮದ ಸಿದ್ದನಹಳ್ಳಿ ಮಜರೆ ನಿವಾಸಿ ರಾಕೇಶ್ ಲಗಮಪ್ಪ ಸುಲಧಾಳ(27) ಎಂಬ ಯುವಕ ಮಂಗಳವಾರ (ಸೆ.13) ಬೆಳಗಾವಿ ನಗರದ ಆರ್.ಟಿ.ಓ. ವೃತ್ತದ ಮರಾಠಾ ಮಂಡಳ ಶಾಲೆಯ ಬಳಿ ಬೈಕ್ ಮೇಲೆ ತೆರಳುತ್ತಿರುವಾಗ ಮಳೆ-ಗಾಳಿಯಿಂದ ಬೃಹತ್ ಮರ ಬಿದ್ದು ಮೃತಪಟ್ಟಿದ್ದರು.

ಈ ಕುರಿತು ಬಿಮ್ಸ್ ನಿಂದ ಮರಣೋತ್ತರ ವರದಿ ಪಡೆದುಕೊಂಡು ತಕ್ಷಣವೇ ಮೃತ ಯವಕನ ತಾಯಿ ಹಾಲವ್ವ ಲಗಮಪ್ಪ ಸುಲಧಾಳ ಅವರ ಆ್ಯಕ್ಸಿಸ್ ಬ್ಯಾಂಕ್ ಖಾತೆಗೆ ಐದು ಲಕ್ಷ ರೂಪಾಯಿ ಪರಿಹಾರಧನವನ್ನು ಬೆಳಗಾವಿ ತಹಶೀಲ್ದಾರ ಕಚೇರಿಯಿಂದ ಆರ್.ಟಿ.ಜಿ.ಎಸ್. ಮೂಲಕ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇದೇ ವೇಳೆ ಮೃತ ಯುವಕ ರಾಕೇಶ್ ಲಗಮಪ್ಪ ಸುಲಧಾಳ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Edited By : Nirmala Aralikatti
PublicNext

PublicNext

13/09/2022 08:40 pm

Cinque Terre

22.88 K

Cinque Terre

0

ಸಂಬಂಧಿತ ಸುದ್ದಿ