ಕಾಗವಾಡ: ಸರ್ಕಾರ ತನ್ನ ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ದು ಗ್ರಾಮೀಣ ಪ್ರದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗುವಂತೆ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ತನ್ನಷ್ಟಕ್ಕೆ ತಾನೇ ಅರ್ಥಹೀನವಾದಂತೆ ಕಂಡುಬರುತ್ತಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದಲ್ಲಿ ಶನಿವಾರ ತಾಲುಕಾ ಆಡಳಿತ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾಟಾಚಾರಕ್ಕೆ ಎಂಬತೆ ತೋರುತ್ತಿತ್ತು .
ಅಲ್ಲದೆ ಕಾರ್ಯಕ್ರಮದ ದೆಯೋದ್ದೇಶಗಳೊಂದಿಗೆ ಜನರ ಅಹವಾಲುಗಳನ್ನು ಸ್ವಿಕರಿಸಿ ಸ್ಥಳದಲ್ಲಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬ ಗ್ರಾಮ ವಾಸ್ತವ್ಯದ ಪರಿಕಲ್ಪನೆಯನ್ನು ಮರೆತ ಅಧಿಕಾರಿಗಳು ಕಾರ್ಯಕ್ರಮ ಆರಂಭವಾದ ಕೆಲ ಹೊತ್ತಿನಲ್ಲೇ ಸ್ಥಳದಿಂದ ಕಾಲ್ಕಿತ್ತಿದ್ದದ್ದು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದೆ.
ಪ್ರಮುಖವಾಗಿ ಜನರ ಸಮಸ್ಯೆಗಳನ್ನು ಆಲಿಸಲು ನಡೆಯಬೇಕಾಗಿದ್ದ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ಮನರಂಜನೆ ಮಾಡಿಸಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ತಾಲೂಕಾಡಳಿತದ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
PublicNext
19/09/2022 10:07 am