ಬೆಳಗಾವಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಬೆಳಗಾವಿ ಜಿಲ್ಲೆಯು ದೇಶದಲ್ಲಿಯೇ ಹತ್ತನೇ ರ‍್ಯಾಂಕ್ ಗಳಿಸಿದೆ.ಕೇಂದ್ರ ಸರಕಾರದ ವತಿಯಿಂದ ಏಪ್ರಿಲ್ 12, 2022 ರಿಂದ ಹಮ್ಮಿಕೊಳ್ಳಲಾಗಿದ್ದ ಆಝಾದಿಸೇ ಅಂತ್ಯೋದಯ ತಕ್ (ಎ.ಎಸ್.ಎ.ಟಿ) ಅಭಿಯಾನವು 15ನೇ ಆಗಸ್ಟ್ 2022 ರಂದು ಮುಕ್ತಾಯಗೊಂಡಿತ್ತು. ಈ ಅಭಿಯಾನದಲ್ಲಿ ದೇಶದ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 75 ಜಿಲ್ಲೆಗಳು ಭಾಗವಹಿಸಿದ್ದವು.
ಈ ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಆಯ್ದ 9 ಇಲಾಖೆಗಳ 17 ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ನಾಗರಿಕರಿಗೆ ಹಾಗೂ ಫಲಾನುಭವಿಗಳಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಿ ಶೇ.84-85 ರಷ್ಟು ಸಾಧನೆಯನ್ನು ಬೆಳಗಾವಿ ಜಿಲ್ಲೆಯು ದಾಖಲಿಸಿತ್ತು.
ಬೆಳಗಾವಿ ಜಿಲ್ಲೆಯ ಈ ವಿಶಿಷ್ಟ ಸಾಧನೆಯನ್ನು ಗುರುತಿಸಿದ ಕೇಂದ್ರ ಸರ್ಕಾರವು ಗೌರವ ಸನ್ಮಾನ ಹಾಗೂ ಪ್ರಶಸ್ತಿ ನಿಡಲಿದೆ. ನವದೆಹಲಿಯ ಹ್ಯಾಬಿಟ್ಯಾಟ್ ಸೆಂಟರ್ ನಲ್ಲಿ ಸೆಪ್ಟೆಂಬರ್ 26 ರಂದು ಸನ್ಮಾನ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Kshetra Samachara
25/09/2022 07:03 pm