ಬೆಳಗಾವಿ : ಡೆಂಗ್ಯೂನಿಂದ ಬಳಲುತ್ತಿದ್ದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದಿದೆ. ಪ್ರೇಮ ಸಂಜಯ ಕಮತೆ(19) ಸಾವನ್ನಪ್ಪಿದ ಯುವಕ.ಮೃತ ಪ್ರೇಮ ಕಮತೆನೂ ಬಿಎಸ್ಸಿ ಮೊದಲನೆಯ ಸೆಮಿಸ್ಟರ್ ನಲ್ಲಿ ಓದುತ್ತಿದ್ದನು.ಕಳೆದ 8 ದಿನಗಳಿಂದ ಡೆಂಗ್ಯೂ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದನು.
ದಿಢೀರ್ ನೆ ಆರೋಗ್ಯದಲ್ಲಿ ಏರುಪೇರು ಆಗಿದರಿಂದ ಮಹಾರಾಷ್ಟ್ರದ ಇಚಲಕರಂಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.ಇನ್ನೂ ಕಾರದಗಾ ಗ್ರಾಮದಲ್ಲಿ ಡೆಂಗ್ಯೂ ಕುರಿತು ಭಯದ ವಾತಾವರಣ ಸೃಷ್ಠಿಯಾಗಿದೆ.ಗ್ರಾಮ ಪಂಚಾಯತ ಹಾಗೂ ಆರೋಗ್ಯ ಇಲಾಖೆ ಡೆಂಗ್ಯೂ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
Kshetra Samachara
30/09/2022 03:58 pm