ಅಥಣಿ : ದೇಶದಿಂದ ಅಪೌಷ್ಟಿಕತೆ ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರಕಾರ ಪೋಷಣ ಅಭಿಯಾನ ಮಾಸಾಚರಣೆ ಎಂಬ ಯೋಜನೆ ರೂಪಿಸಿದೆ. ಮಹಿಳೆ ಮತ್ತು ಮಗುವಿನ ಆರೋಗ್ಯಕರ ಬೆಳವಣಿಗೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಹಸೀಲ್ದಾರ ಸುರೇಶ ಮುಂಜೆ ಹೇಳಿದರು.
ಅವರು ಶುಕ್ರವಾರ ಪಟ್ಟಣದ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದರು.
ತಾಲೂಕು ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ ಮಾತನಾಡಿ ಇಂದಿನ ಒತ್ತಡದ ಬದುಕಿನಲ್ಲಿ ದೇಹಕ್ಕೆ ಒಳ್ಳೆಯ ಪೋಷಕಾಂಶಗಳುಳ್ಳ ಆಹಾರವನ್ನು ಸೇವಿಸುವುದು ಅಗತ್ಯವಿದೆ. ಮಹಿಳೆಯರು ಮತ್ತು ಯುವತಿಯರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಬೇಕರಿ ಆಹಾರಗಳನ್ನು, ರೆಡಿಮೇಡ್ ಪ್ಯಾಕೆಟ್ ದಲ್ಲಿನ ಆಹಾರಗಳನ್ನು ಸೇವಿಸಿ ಎಂದರು. ಅಥಣಿ ಮತ್ತು ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗರ್ಭಿಣಿಯರಿಗೆ ಉಡಿತುಂಬಿ, ಆರತಿ ಎತ್ತಿ ಸೀಮಂತ ಮಾಡಿ ಪೋಷಣ್ ಮಾಸಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ ಪಾಟೀಲ, ತಾಲೂಕ ಪಂಚಾಯತ ವ್ಯವಸ್ಥಾಪಕ ಉದಯಗೌಡ ಪಾಟೀಲ, ಆರೋಗ್ಯ ಇಲಾಖೆಯ ಸಂಯೋಜಕಿ ಎ. ಬಿ ಗುಳ್ಳೆದಾರ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Kshetra Samachara
02/10/2022 09:44 am