ಅಥಣಿ: ಫಸಲ ಭೀಮಾ ಯೋಜನೆಅಡಿಯಲ್ಲಿರುವ ತಾಂತ್ರಿಕ ದೋಷ ಸರಿಪಡಿಸಿ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ದ್ರಾಕ್ಷಿ ಬೆಳೆಗಾರರು ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ ಅವರ ನೇತೃತ್ವದಲ್ಲಿ ಮಾಜಿ ಡಿಸಿಎಂ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇದೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ ಅವರು ಮಾತನಾಡಿ ಫಸಲ ಭೀಮಾ ಯೋಜನೆಅಡಿಯಲ್ಲಿ ಕೇಲವೊಂದು ಲೋಪ ದೋಷಗಳಿದ್ದು. ಹವಾಮಾನ ವೈಪರಿತ್ಯ, ಮತ್ತು ಮಳೆ ಹಾನಿಯಿಂದ ದ್ರಾಕ್ಷಿ ಬೆಳೆಗಾರರು ನಷ್ಟ ಅನುಭವಿಸಿದ್ದು ತಾಂತ್ರಿಕ ತೊಂದರೆ ಸರಿಪಡಿಸಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸುವಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಈ ವೇಳೆ ವುವಿಧ ಗ್ರಾಮಗಳ ರೈತ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
PublicNext
17/09/2022 08:33 pm