ಅಥಣಿ: "ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ, ಹಗ್ಗ ಹಿಡಿದು ಹಳ್ಳ ದಾಟಿದ ರೈತರು" ಎಂಬ ಶಿರ್ಷಿಕೆಯಡಿ ಕಳೆದ ನಾಲ್ಕು ದಿನಗಳ ಹಿಂದೆ ಪಬ್ಲಿಕ್ ನೆಕ್ಸ್ಟ ಸುದ್ದಿ ಬಿತ್ತರಿಸಿದ ಬೆನ್ನಲೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಬ್ರಿಜ್ ನಿರ್ಮಿಸಲು ಮುಂದಾಗಿದ್ದಾರೆ.
ಹೌದು. ಕಳೆದ ನಾಲ್ಕು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ರೈತರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುವುದರ ಬಗ್ಗೆ ಸುದ್ದಿ ಬಿತ್ತರಿಸಲಾಗಿತ್ತು.
ಶಾಸಕ ಮಹೇಶ ಕುಮಠಳ್ಳಿ ಹುಟ್ಟುರಾದ ತೆಲಸಂಗ ಗ್ರಾಮದಲ್ಲಿ ಕಳೆದ ವರ್ಷವೆ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ಅತಿಯಾದ ಮಳೆಯಿಂದಾಗಿ ಡೋಣಿ ಹಳ್ಳದ ನೀರು ಅತಿಯಾಗಿದ್ದರಿಂದ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಹೀಗಾಗಿ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲಿ ಅನಾನಕೂಲ ಆಗುತ್ತಿರುವುನ್ನು ಪಬ್ಲಿಕ್ ನೆಕ್ಸ್ಟ ಸುದ್ದಿ ಬಿತ್ತರಿಸಿದ ಬೆನ್ನಲ್ಲೆ ಎಚ್ಚೆತ್ತು ಅಥಣಿ ತಾಲೂಕಾಡಳಿತ ಸೇತುವೆ ಮಾಡಲು ಮುಂದಾಗಿದ್ದು ಸ್ಥಳೀಯರು ಪಬ್ಲಿಕ್ ನೆಕ್ಟ್ಸಗೆ ಧನ್ಯವಾದ ತಿಳಿಸಿದ್ದಾರೆ.
PublicNext
04/10/2022 05:32 pm