ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬ್ರುದುಕ ಗ್ರಾಮದಲ್ಲಿ ಇಂದು ದಲಿತ ಸಂಘಟನೆಗಳು ಉಗಾರ ಬುದ್ರುಕ ರಸ್ತೆಯನ್ನು ತಡೆದು ಕುಡಿಯುವ ನೀರು ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಿಕೂಡುವಂತೆ ಆಗ್ರಹಿಸಿ ಖಾಲಿ ಕೊಡ, ಬಕೆಟಗಳನ್ನ ಹಿಡಿದು ರಸ್ತೆ ತಡೆದು ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹಾಗೂ ತಾಲೂಕು ಆಡಳಿತದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಗ್ರಾಮಸ್ಥರೊಬ್ಬರು ಸುಮಾರು ವರ್ಷಗಳಿಂದ ಕುಡಿಯುವ ನೀರು ಹಾಗೂ ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದವೆ. ಇದರಿಂದ ನಮ್ಮ ಮಕ್ಕಳ ಶಿಕ್ಷಣಕ್ಕೂ ಬಹಳಷ್ಟು ತೊಂದರೆಯಾಗುತ್ತಿದೆ. ಸಾಕಷ್ಟು ಸಲ ಕಾಗವಾಡ ತಾಲೂಕಿನ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಇನ್ನು ಶಾಸಕ ಶ್ರೀಮಂತ ಪಾಟೀಲ ಕೇವಲ ಎಲೆಕ್ಷನ್ ಸಮಯದಲ್ಲಿ ಬಂದು ಹೋದವರು ಇನ್ನು ವರೆಗೂ ಇನ್ನುವೆರೆಗೂ ಈ ಕಡೆ ಬಂದಿಲ್ಲ ಎಂದು ಜನರು ಹಿಡಿಶಾಪ ಹಾಕಿದ್ದಾರೆ.
ಇನ್ನಾದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ನಮಗೆ ಮೂಲಭೂತ ಸೌಕರ್ಯವನ್ನು ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ತದನಂತರ ಕಾಗವಾಡ ಪೋಲಿಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರನ್ನ ಮನವೊಲಿಸಿ ಪ್ರತಿಭಟನೆಯನ್ನು ತಿಳಿಗೊಳಿಸಿದರು.
PublicNext
06/10/2022 07:57 pm