ಬೆಳಗಾವಿ: ರೈತರು ಬೆಳೆದ ಪ್ರತಿ ಟನ್ ಕಬ್ಬಿಗೆ 5,500 ರೂ. ದರ ನಿಗದಿ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿರುವ ಪ್ರತಿಭಟನೆ ಎರಡನೆ ದಿನವೂ ಮುಂದುವರೆದಿದೆ. ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬ್ಬು ಬೆಳೆಗಾರರಿಗೆ 5,500ದರ ನಿಗದಿ ಮಾಡುವಂತೆ ಬೆಳಗಾವಿ ಡಿಸಿ ಕಚೇರಿಗೆ ಬೀಗ ಹಾಕಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿರುವ ರೈತರು, ಡಿಸಿ ಕಚೇರಿ ಮುಂಭಾಗದಲ್ಲಿಯೇ ಹಾಸಿಗೆ ಹಾಸಿ ರೈತರಿಂದ ಪ್ರತಿಭಟನೆ ನಡೆಸಿದ್ದಾರೆ. ಹಾಗೂ ಸ್ಥಳಕ್ಕೆ ಸಕ್ಕರೆ ಸಚಿವ ಶಂಕರಪಾಟೀಲ್ ಮನೇನಕೊಪ್ಪ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.
ಇದೇ ವೇಳೆ ರೈತರು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮೇಲೆ ಕೂಡಾ ಆಕ್ರೋಶ ಹೊರಹಾಕಿದ್ರು. ನಾವು ರೈತರು ಇಷ್ಟೆಲ್ಲ ಪ್ರತಿಭಟನೆ ಮಾಡುತ್ತಿದ್ದರೂ ಇದುವರೆಗೆ ಒಮ್ಮೆಯೂ ರೈತರಿಗೆ ಪೋನ್ ಮಾಡಿ ನಮ್ಮ ಸಮಸ್ಯೆಗಳನ್ನು ಬಗೆ ಹರಿಸುತ್ತೇನೆ ಎಂದು ಒಂದು ಬಾರಿಯೂ ಸೌಜನ್ಯಕ್ಕಾದ್ರೂ ನಮ್ಮನ್ನ ಕೇಳಿಲಿಲ್ಲ ಎಂದು ಕಾರಜೋಳ ಮೇಲೆ ಹರಿಹಾಯದ್ರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ್ ನಡೆಸಿದ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಜಿಲ್ಲಾಧಿಕಾರಿ ಆವರಣದ ಸುತ್ತ ಬಿಗಿ ಪೊಲೀಸ್ ಬಂದೋ ಬಸ್ತ ಏರ್ಪಡಿಸಲಾಗಿದೆ.
PublicNext
11/10/2022 06:54 pm