ಖಾನಾಪುರ : ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಹಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದಡಿ ಸ್ವಚ್ಛತಾ ವಾಹಿನಿ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಯಿತು.
ಹಲಸಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಹಂಜಿ ಅವರ ನೇತೃತ್ವದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು,ಶಾಲಾ ಮಕ್ಕಳು ಈ ಜಾಗೃತಿ ಜಾಥಾದಲ್ಲಿ ಭಾಗಿಯಾಗಿ ಗ್ರಾಮಸ್ಥರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಿದರು. ನಂತರ ಗ್ರಾಮದ ದೇವಸ್ಥಾನದ ಸುತ್ತಲೂ ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
Kshetra Samachara
25/09/2022 10:38 pm