ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ದೇವಸ್ಥಾನಗಳು ನಮ್ಮ ಅಪ್ಪನ ಮನೆಯ ಆಸ್ತಿಗಳಲ್ಲ; ಜೊಲ್ಲೆ ವಿರುದ್ಧ ಕಾಗೆ ಆಕ್ರೋಶ

ಕಾಗವಾಡ: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಕಾರ್ಯವೈಖರಿಯ ಕುರಿತು ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಸೋಮವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಅವರು, ಮುಜರಾಯಿ ಇಲಾಖೆ ಕೇವಲ ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡುತ್ತಿದ್ದೆ. ಆದರೆ ಕರ್ನಾಟಕದಲ್ಲಿ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು. ಅಷ್ಟೇ ಅಲ್ಲದೆ ನಾವು ಪಕ್ಷಾತೀತವಾಗಿ ಸಚಿವೆ ಶಶಿಕಲಾ ಜೋಲ್ಲೆ ಅವರಿಗೆ ದೇವಸ್ಥಾನಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಅನುದಾನವನ್ನು ಕಾಂಗ್ರೆಸ್ ಪಕ್ಷ ನಾಯಕರು ಕೇಳುತ್ತಿದ್ದಾರೆ ಒಂದು ವೇಳೆ ಅನುದಾನ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತದೆ ಎಂದು ರಾಜಕಾರಣ ಮಾಡುತ್ತಿದ್ದಾರೆ ಎಂದು ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಕಾಂಗ್ರೆಸ್ ಪಕ್ಷದವರು ಹೆಳುತ್ತಿದ್ದಾರೆ ಎಂದು ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಬೆರೆಸಿ ಅಭಿವೃದ್ಧಿ ಯೋಜನೆಗಳನ್ನು ಕಡೆಗಣಿಸಿದರೆ ಕರ್ನಾಟಕ ಅಭಿವೃದ್ಧಿಯಾಗುವುದು ಯಾವಾಗ ಎಂದು ಪ್ರಶ್ನೆ ಮಾಡಿದರು.

ದೇವಸ್ಥಾನಗಳು ನಮ್ಮ ಅಪ್ಪನ ಮನೆಯ ಆಸ್ತಿಗಳಲ್ಲ ಎಂಬುದನ್ನು ಸಚಿವೆ ಜೊಲ್ಲೆ ಅರಿತುಕೊಳ್ಳಬೇಕಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Edited By : Somashekar
Kshetra Samachara

Kshetra Samachara

04/10/2022 02:22 pm

Cinque Terre

21.02 K

Cinque Terre

0

ಸಂಬಂಧಿತ ಸುದ್ದಿ