ಗೋಕಾಕ: ಉಪ್ಪಾರ ಸಮಾಜವನ್ನು ಎಸ್ ಟಿಗೆ ಸೇರಿಸುವಂತೆ ಒತ್ತಾಯಿಸಿ ಇಂದು ಗೋಕಾಕ ನಗರದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಮಾತನಾಡಿ ಉಪ್ಪಾರ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿದಿದ್ದು ರಾಜ್ಯ ಸರಕಾರ ಕುಲಶಾಸ್ತ್ರೀಯ ಅಧ್ಯಯನ ಪರಿಶೀಲನೆ ಮಾಡಿ ಎಸ್ ಟಿಗೆ ಸೇರ್ಪಡೆ ಮಾಡಬೇಕು ಎಂದರು.
ಎಸ್ ಸಿ ಎಸ್ ಟಿಗಿಂತಲೂ ಹಿಂದುಳಿದ ಉಪ್ಪಾರ ಸಮಾಜವನ್ನು ಪ್ರವರ್ಗದಲ್ಲಿ ಸೇರಿಸಲಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸಿರುವ ಎಲ್ಲ ಸರಕಾರಗಳು ಉಪ್ಪಾರ ಸಮಾಜಕ್ಕೆ ಸೂಕ್ತವಾದ ಮೀಸಲಾತಿ ಸ್ಥಾನ ಮಾನ ನೀಡಲು ಮುಂದೆ ಬಂದಿಲ್ಲ.
ರಾಜ್ಯದ ಬಸವರಾಜ ಬೊಮ್ಮಾಯಿ ಅವರ ನೇತ್ರತ್ವದ ಸರಕಾರ ಈ ಕೂಡಲೇ ಎಸ್ ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಖಾಂತರ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಉಪ್ಪಾರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವಸದಸ್ಯರ ಹಾಗೂ ಸಮಾಜದ ಹಿರಿಯರು ಯುವಕರು ಉಪಸ್ಥಿತರಿದ್ದರು.
PublicNext
13/10/2022 03:14 pm