ಖಾನಾಪುರ: ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣ ಪಂಚಾಯಿತಿಯಲ್ಲಿ ಕಳೆದ 30 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂ ಗೊಳಿಸುವಂತೆ ಆಗ್ರಹಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಪಟ್ಟಣ ಪಂಚಾಯಿತಿಯಲ್ಲಿ ಹಲವಾರು ಪೌರ ಕಾರ್ಮಿಕರು 30 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ. ಆದರೆ, ಸರ್ಕಾರ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಬಿಟ್ಟು ಅಲ್ಪಾವಧಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಕಾರ್ಮಿಕರನ್ನು ಖಾಯಂ ಗೊಳಿಸಿ ಅನ್ಯಾಯ ಮಾಡಿದೆ. ಹೀಗಾಗಿ ಎಲ್ಲರನ್ನೂ ಖಾಯಂಗೊಳಿಸಿ ಆದೇಶ ಹೊರಡಿಸಬೇಕು ಮತ್ತು ಸ್ಥಳಕ್ಕೆ ಜಿಲ್ಲಾಧಿಕಾರಿ ಬಂದು ಭರವಸೆ ಕೊಡುವವರೆಗೆ ಮುಷ್ಕರ ಕೈಬಿಡುವುದಿಲ್ಲ ಎಂದು ಕಾರ್ಮಿಕರು ಹೇಳಿದರು.
ಪಟ್ಟಣ ಪಂಚಾಯಿತಿ ಅಧಿಕಾರಿ ಸಂತೋಷ್ ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಪೌರ ಕಾರ್ಮಿಕರನ್ನು ನೇರ ವೇತನದಡಿಯಲ್ಲಿ ಖಾಯಂ ಗೊಳಿಸಿದೆ. ಇನ್ನೂ ಕೆಲ ಕಾರ್ಮಿಕರು ವಾಟರ್ ಶೆಡ್ ಕಾರ್ಮಿಕರಾಗಿರುವುದರಿಂದ ಖಾಯಂಗೊಳಿಸಿಲ್ಲ. ಇವರನ್ನೂ ಕೂಡ ಖಾಯಂಗೊಳಿಸುವಂತೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಆದರೆ, ಕಾರ್ಮಿಕರು ಮಾತ್ರ ಆದೇಶ ಹೊರಡಿಸುವರೆಗೂ ಮುಷ್ಕರ ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ. ಅಧಿಕಾರಿಗಳು ಹಾಗೂ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆಂದು ಕಾದು ನೋಡಬೇಕಾಗಿದೆ.
-ನಾಗೇಶ್ ನಾಯ್ಕರ್, ಪಬ್ಲಿಕ್ ನೆಕ್ಸ್ಟ್ ಖಾನಾಪುರ
PublicNext
24/10/2024 08:15 am