ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಅಥಣಿ ಹೆಸ್ಕಾಂ ನೌಕರನ ಆತ್ಮಹತ್ಯೆಗೆ ಬಿಗ್‌ ಟ್ವಿಸ್ಟ್

ಅಥಣಿ: ಕಳೆದ ಸೋಮವಾರ ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಕಾರ್ಮಿಕನೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಹೊಸತಿರುವು ಪಡೆದುಕೊಂಡಿದೆ.

ಮೇಲಾಧಿಕಾರಿ, ಓರ್ವ ಲೈನ್ ಮನ್ ಕಿರುಕಳ, ಮಾನಸಿಕ ಹಿಂಸೆ ಹಾಗೂ ಭೇದಭಾವದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಮೃತ ಮಂಜುನಾಥ್ ಮುತ್ತಗಿ ಉಲ್ಲೇಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸ್ಥಳಕ್ಕೆ ಅಥಣಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆತ್ಮಹತ್ಯೆ ಮಾಡಿಕೊಂಡಿರುವ ಮಂಜುನಾಥ ಮುತ್ತಗಿ ಪತ್ನಿ ಲಕ್ಷ್ಮೀ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನನ್ನ ಪತಿಯ ಸಾವಿಗೆ ಅಥಣಿ ಹೆಸ್ಕಾಂ ಅಧಿಕಾರಿ ನಜೀರ್ ಡಾಲಾಯತ್, ಲೈನ್‌ಮನ್ ಬಸವರಾಜ್ ಸದಾಶಿವ ಕುಂಬಾರ ಕಾರಣ ಎಂದು ಆರೋಪಿಸಿದ್ದಾರೆ.

ನನ್ನ ಪತಿಗೆ ಭೇದಭಾವ, ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By : Somashekar
Kshetra Samachara

Kshetra Samachara

13/09/2022 11:24 am

Cinque Terre

37.88 K

Cinque Terre

0

ಸಂಬಂಧಿತ ಸುದ್ದಿ