ಬೆಳಗಾವಿ: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿರುವ ಇಲಾಖೆಗಳ ಮೇಲೆ ದಾಳಿ ನಡೆಸಿ ಭ್ರಷ್ಟರ ಚಳಿ ಬಿಡಿಸಿದ್ದಾರೆ. ಗಡಿ ಜಿಲ್ಲೆಯ ಬೆಳಗಾವಿ ಜಿಲ್ಲೆಯಲ್ಲೂ ಆರ್‌ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು-ಮುಂಬೈ ರಸ್ತೆ ಮೇಲಿರುವ ಚೆಕ್ ಪೋಸ್ಟ್ ವಾಹನ ಸವಾರರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ನಗದು ಸಿಕ್ಕಿದ್ದು, ಅಧಿಕಾರಿಗಳಿಂದ ಹೆಚ್ಚಿನ ಪರಿಶೀಲನೆ ಮುಂದುವರಿದಿದೆ ಎಂದು ತಿಳಿದು ಬರುತ್ತಿದೆ.
Kshetra Samachara
30/09/2022 03:15 pm