ಬೆಳಗಾವಿ: ಸರ್ವರೋಗಕ್ಕೂ ಸಾರಾಯಿ ಮದ್ದು ಎಂಬುದು ಮದ್ಯ ಪ್ರಿಯರ ಮಾತು. ಆದರೆ ಮದ್ಯದ ಅಮಲಿನಲ್ಲಿಯೇ ಎಂಟು ಅಡಿಯಷ್ಟು ಉದ್ದದ ಹಾವನ್ನು ಹಿಡಿದು ಹಾವಿನ ಜತೆ ಹುಚ್ಚಾಟ ಮೆರೆದು, ಕೊನೆಗೆ ಹಾವುನ್ನು ಸುರಕ್ಷಿತ ಸ್ಥಳಕ್ಕೆ ಬಿಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಡೆದಿದೆ.
ತಾಲೂಕಿನ ಪಾಲಭಾವಿ ಗ್ರಾಮದ ಸೊನ್ನದ್ ತೋಟದ ಅಂಗನವಾಡಿಯಲ್ಲಿ ಕಾಣಿಸಿಕೊಂಡ ಹಾವನ್ನು ರಮೇಶ್ ಬಾಗಡೆ ಎಂಬುವರು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಆದರೆ ರಮೇಶ್ ಬಾಗಡೆ ಮದ್ಯದ ಅಮಲಿನಲ್ಲಿಯೇ ಹಾವನ್ನು ಹಿಡಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಯಾವುದೇ ಮುಂಜಾಗ್ರತೆ ಕ್ರಮ ಅನುಸರಿಸದ ರಮೇಶ್ ಮುಖ, ಕೆನ್ನೆ, ತುಟಿ ಮತ್ತು ಕಾಲಿಗೆ ಹಾವು ಕಚ್ಚಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ 20 ವರ್ಷಗಳಿಂದ ಹಾವುಗಳನ್ನು ಹಿಡಿಯುತ್ತೇನೆ ಎಂದು ಹೇಳಿದ್ದಲ್ಲದೆ ಬಳ್ಳೊಳ್ಳಿ ಹಾಗೂ ನೀರನ್ನು ಸೇವಿಸುತ್ತೇನೆ. ಇದರಿಂದ ನನಗೆ ಹಾವು ಕಚ್ಚಿದರೂ ಏನು ಆಗೋದಿಲ್ಲವೆಂದು ರಮೇಶ್ ತಿಳಿಸಿದ್ದಾರೆ. ಇವರ ಧೈರ್ಯವನ್ನು ಗ್ರಾಮಸ್ಥರು ಕೊಂಡಾಡಿದ್ದಾರಲ್ಲದೆ ಅರಣ್ಯ ಇಲಾಖೆ ವತಿಯಿಂದ ರಮೇಶ್ ಗೆ ಪುರಸ್ಕಾರ ನೀಡಬೇಕೆಂದು ಕೋರಿದ್ದಾರೆ.
PublicNext
14/09/2022 11:17 am