ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಹಾಸ್ಟೆಲ್ ಊಟದಲ್ಲಿ ಜಿರಳೆ ಪತ್ತೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳಗಾವಿ: ವಸತಿ ಗೃಹದಲ್ಲಿ ನೀಡುವ ಊಟದಲ್ಲಿ ಜಿರಳೆಗಳು ಪತ್ತೆ ಆಗಿದ್ದು, ಅದೇ ಊಟದ ಸಮೇತವಾಗಿ ವಿದ್ಯಾರ್ಥಿಗಳು ಪ್ರತಿಭಟಿಸಿ ತಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದರು.

ಇಂದು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದ ಎದುರಿಗೆ ಪಟ್ಟಣದ ಆಂಜನೇಯ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ವಸತಿ ಗೃಹದ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ವಸತಿ ಗೃಹದಲ್ಲಿ ಕಳಪೆ ಮಟ್ಟದ ಆಹಾರ ನೀಡಲಾಗುತ್ತದೆ, ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸಹ ಸರಿ ಇಲ್ಲ, ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬೆದ್ದು ನಾರುತ್ತಿವೆ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ‌ವಸತಿ ಗೃಹದಲ್ಲಿರುವ ಇರುವ ತಮ್ಮ ಸಮಸ್ಯೆಗಳನ್ನು ತಹಶಿಲ್ದಾರರ ಗಮನಕ್ಕೆ ತರಲು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿತ್ತು.‌

Edited By :
PublicNext

PublicNext

14/09/2022 10:20 pm

Cinque Terre

47.43 K

Cinque Terre

1

ಸಂಬಂಧಿತ ಸುದ್ದಿ