ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಕಾಲಕ್ಕೆ ತಕ್ಕಂತೆ NDRF ಮಾರ್ಗಸೂಚಿ ಬದಲಾಗಲಿ; ಚನ್ನರಾಜ್ ಹಟ್ಟಿಹೊಳಿ

ಬೆಳಗಾವಿ - ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಯೋಗ್ಯ ರೀತಿಯಲ್ಲಿ ಬೆಳೆ ಹಾನಿಗೆ ಮತ್ತು ಇನ್ನಿತರ ಆಸ್ತಿ ಹಾನಿಗೆ ಪರಿಹಾರ ನೀಡಬೇಕು. ಪರಿಹಾರ ಮೊತ್ತ ಹೆಚ್ಚಿಸುವುದಕ್ಕೆ ಕಾಲಕ್ಕೆ ತಕ್ಕಂತೆ ಎನ್.ಡಿ. ಆರ್.ಎಫ್ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಒತ್ತಾಯಿಸಿದ್ದಾರೆ.

ಈ ಕುರಿತು ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತಲಿದ್ದೇನೆ ಮತ್ತು ಪ್ರಧಾನ ಮಂತ್ರಿಗಳಿಗೆ ಪತ್ರವನ್ನೂ ಬರೆಯುತ್ತೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅತ್ಯಂತ ಹಳೆಯ NDRF ಮಾರ್ಗಸೂಚಿಗಳಿಂದಾಗಿ ರೈತರಿಗೆ ಅತ್ಯಂತ ಕಡಿಮೆ ಬೆಳೆ ಪರಿಹಾರ ಸಿಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ವಿಪರೀತ ಮಳೆ ಬಿದ್ದು 400 ಕೋಟಿ ರೂ ಗಳಿಗಿಂತ ಹೆಚ್ಚಿನ ಹಾನಿ ಆಗಿದ್ದರೂ NDRF ಮಾರ್ಗಸೂಚಿ ಪ್ರಕಾರ 105 ಕೋಟಿ ರೂ ಹಾನಿ ಆಗಿದೆ ಎಂದು ಬೆಳಗಾವಿ ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದೆ

ಕೇಂದ್ರ ಸರ್ಕಾರ ಹಲವಾರು ನಗರಗಳ,ರಸ್ತೆಗಳ ಹೆಸರು ಬದಲು ಮಾಡಿದೆ. ಆದರೆ ಬ್ರಿಟೀಷರ ಕಾಲದಲ್ಲಿ ರೂಪಿಸಲಾದ NDRF ಮಾರ್ಗಸೂಚಿಗಳನ್ನು ಬದಲಾಯಿಸದೇ ರೈತರಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಅನ್ಯಾಯ ಮಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದಲ್ಲಿ ತಕ್ಷಣ ಪರಿಹಾರದ ಕುರಿತಾದ ಮಾರ್ಗಸೂಚಿಗಳನ್ನು ಬದಲಾಯಿಸಬೇಕು ಎಂದು ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ.

Edited By : Abhishek Kamoji
Kshetra Samachara

Kshetra Samachara

18/09/2022 05:02 pm

Cinque Terre

20.12 K

Cinque Terre

0

ಸಂಬಂಧಿತ ಸುದ್ದಿ