ಬೆಳಗಾವಿ: ಜಿಲ್ಲೆಯ 500ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್ ಮತ್ತು ಬಿಲ್ ಕಲೆಕ್ಟರ್ಗಳ ಜೇಷ್ಠತಾ ಪಟ್ಟಿ ಮೂಲಕ ಬಡ್ತಿ ನೀಡಬೇಕು. ಜೇಷ್ಠತಾ ಪಟ್ಟಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯತ ನೌಕರರು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುವ ನೌಕರರ ಜೇಷ್ಠತಾ ಪಟ್ಟಿಯು ಸರಕಾರದ ಆದೇಶದ ಪ್ರಕಾರ ಸಿದ್ದವಾಗಿದಿಲ್ಲಾ. ಆಯುಕ್ತಾಲಯದ ನಿರ್ದೇಶನದ ಮೇರೆಗೆ ಸೆ.14 ಜಿಲ್ಲಾ ಸಮಿತಿಯ ಸರಿಯಾದ ಪಟ್ಟಿ ಸಿದ್ದಪಡಿಸಲಾಯಿತು. ಸೆ.15 ರಂದು ಬಿಡುಗಡೆಗೊಳಿಸುವುದಾಗಿ ಹೇಳಿದ್ದ ಅಧಿಕಾರಿಗಳು ಈವರೆಗೂ ಪಟ್ಟಿ ಬಿಡುಗಡೆಗೊಳಿಸಿಲ್ಲ.
ಇದರಿಂದ ಕೂಡಲೇ ಪಟ್ಟಿ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ನೌಕರರು ಧರಣಿ ಸತ್ಯಾಗ್ರಹ ನಡೆಸಿದರು. ಈ ವೇಳೆ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿ, ಅವರು ನೀಡಿದ ಭರವಸೆ ಮೇರೆಗೆ ಪ್ರತಿಭಟನಾಕಾರರು ಧರಣಿ ಸತ್ಯಾಗ್ರಹ ಹಿಂಪಡೆದರು.
PublicNext
23/09/2022 04:13 pm