ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ಬಿಎಸ್ ವೈ ತಮ್ಮ ಮಾನಸ ಪುತ್ರ ಬೊಮ್ಮಾಯಿ ಮೇಲೆ ಒತ್ತಡ ಹಾಕಬೇಕು: ಜಯಮೃತ್ಯುಂಜಯ ಸ್ವಾಮೀಜಿ*

ಅಥಣಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮಾನಸ ಪುತ್ರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ, ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಅವರು ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಂದ ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿ ಎತ್ತಿದ್ದಾರೆ. ಆದರೆ ಸದನದಲ್ಲಿ ಮಾತನಾಡಿ ಅಷ್ಟಕ್ಕೇ ಸುಮ್ಮನಾಗಬಾರದು, ಬಿಎಸ್ ವೈ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಯ ಮೃತ್ಯುಂಜಯ ಸ್ವಾಮೀಜಿ ಬಿಎಸ್ ವೈ ಅವರಿಗೆ ಸಲಹೆ ನೀಡಿದರು.

ಮುಖ್ಯಮಂತ್ರಿಯವರು ಬರುವ ಸಚಿವ ಸಂಪುಟದಲ್ಲಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದೆಂದು ಭರವಸೆ ನೀಡಿದ್ದಾರೆ. ಮಾತು ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧದ ಮುಂದೆ ಪ್ರತಿಭಟನೆ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ಸ್ವಾಮೀಜಿ ಎಚ್ಚರಿಕೆಯನ್ನು ನೀಡಿದರು. ಕೊನೆ ಹಂತದ ಪ್ರತಿಭಟನೆ ಆಗಿದ್ದರಿಂದ ಮಾಡು ಇಲ್ಲವೇ ಮಡಿ, ಮಡಿಯುವ ಮುನ್ನ ಮೀಸಲಾತಿ ಪಡಿ ಎಂಬ ಪ್ರತಿಭಟನೆಗೆ ಮುಂದಾಗುತ್ತೇವೆ.

Edited By : Somashekar
Kshetra Samachara

Kshetra Samachara

27/09/2022 01:31 pm

Cinque Terre

19.16 K

Cinque Terre

0

ಸಂಬಂಧಿತ ಸುದ್ದಿ