ಬೆಳಗಾವಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಮುಸ್ಲಿಂ ಮಹಿಳೆಯರಿಗೆ ಸರಕಾರದಿಂದ 1 ಲಕ್ಷ ರೂ. ನೀಡಲಾಗುವುದು. ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಚಿಕ್ಕೋಡಿ ಪಟ್ಟಣದ ಹೊಸಪೇಠ ಗಲ್ಲಿ ಬಳಿ ಇರುವ ಖಬರಸ್ಥಾನದ ಕಂಪೌಂಡ್ ನಿರ್ಮಾಣಕ್ಕೆ ಇಲಾಖೆ ವತಿಯಿಂದ 10 ಲಕ್ಷ ರೂ.ಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ, ಶಾಂಭವಿ ಅಶ್ವತ್ಥಪುರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಆದಮ ಗಣೇಶವಾಡಿ, ಸಂತೋಷ ಜೋಗಳೆ, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ದಾಡಿವಾಲೆ, ವಿಶ್ವನಾಥ ಕಾಮಗೌಡ, ಸಿದ್ದಪ್ಪ ಡಂಗೇರ ಮತ್ತಿತರರು ಉಪಸ್ಥಿತರಿದ್ದರು.
PublicNext
19/09/2022 02:17 pm