ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2012ರಲ್ಲಿ ಕಾಂಗ್ರೆಸ್ ನ ಶಾಸಕರಾಗಿದ್ದ ಕೃಪಾಕರ ಸಿಂಗ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸಂಜೀವ ತಿವಾರಿ ಭ್ರಷ್ಟಾಚಾರದ ಆರೋಪ ಮಾಡಿದ್ರು. ಆಗ ಬಿಜೆಪಿಯವರೇ ಹೋಗಿ ಪ್ರತಿಭಟನೆ ಮಾಡಿದ್ದರು. ಆದರೆ ಈಗ ತಮ್ಮ ಶಾಸಕರು ಭ್ರಷ್ಟಾಚಾರ ಮಾಡಿದ್ದರೂ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಅಭಯ್ ಪಾಟೀಲ್ ಮೇಲೆ ಭ್ರಷ್ಟಾಚಾರ ಆರೋಪ ಮಾಡಿರುವ ನನ್ನ ಮೇಲೆ ಒತ್ತಡ ಹಾಕಿ ಹಿಂಪಡೆಯುವಂತೆ ದಬ್ಬಾಳಿಕೆ ಮಾಡುತ್ತಿದ್ದಾರೆ. ನನ್ನ ಕುಟುಂಬಕ್ಕೆ ಜೀವ ಹಾನಿಯಾದರೆ ನೇರವಾಗಿ ಶಾಸಕ ಅಭಯ ಪಾಟೀಲರೇ ಕಾರಣ ಎಂದರು.
Kshetra Samachara
28/09/2022 02:57 pm