ಬೆಳಗಾವಿ: ಕೊಲೆ ಆರೋಪಿದಡಿ ಜೈಲಿನಲ್ಲಿರುವ ಆರೋಪಿ ಒರ್ವ ವಿಡಿಯೋ ಕಾಲ್ ಮೂಲಕ ಪುರಸಭೆ ಸಾಮಾನ್ಯ ಸಭೆಗೆ ಹಾಜರಾಗಿ ತನ್ನ ವಾರ್ಡ್ ಕುರಿತು ಸಭೆಯಲ್ಲಿ ಚರ್ಚೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.
ಕೊಲೆ ಆರೋಪದಡಿ ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿರುವ ಸಂಕೇಶ್ವರ ಪುರಸಭೆಯ 14ನೇ ವಾರ್ಡಿನ ಬಿಜೆಪಿ ಸದಸ್ಯ ಉಮೇಶ ಕಾಂಬಳೆ ಕೋರ್ಟ್ ಪರವಾನಿಗೆ ಪಡೆದು ಸಾಮಾನ್ಯ ಸಭೆಗೆ ವಿಡಿಯೋ ಕಾಲ್ ಮೂಲಕ ಹಾಜರಾಗಿದ್ದಾನೆ.
ಪುರಸಭೆ ಸದಸ್ಯನಾಗಿರುವ ಉಮೇಶ ಕಾಂಬಳೆ ಕಳೆದ ಎಂಟು ತಿಂಗಳ ಹಿಂದೆ ಕಂಟ್ರಿ ಪಿಸ್ತೂಲ್ ಬಳಸಿ ಸಂಕೇಶ್ವರ ಪಟ್ಟಣದ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಎನ್ನಲಾಗಿದೆ. ಈ ಪ್ರಕರಣದಲ್ಲಿ ಈತ ಬಂಧನಕ್ಕೊಳಗಾಗಿದ್ದು, ಪುರಸಭೆ ಸಾಮಾನ್ಯ ಸಭೆಗೆ ಹಾಜರಾಗಿದ್ದಾನೆ.
PublicNext
22/09/2022 11:39 am