ಬೆಳಗಾವಿ: ಆಮ್ಲಜನಕದ ಖಜಾನೆ, ಜೀವವೈವಿಧ್ಯ ತಾಣ ಕಪ್ಪತಗುಡ್ಡ ಉಳಿವಿಗಾಗಿ ಬೆಳಗಾವಿಯಲ್ಲಿ ಶಿವಕುಮಾರ್ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಇಂದು ಬೆಳಗಾವಿ ನಗರದ ಪ್ರಾದೇಶಿಕ ಕಚೇರಿ ಮುಂಭಾಗದಲ್ಲಿ ನಂದಿವೇರಿ ಶಿವಕುಮಾರ್ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅಪಾರ ವನಸ್ಪತಿ ಖನಿಜ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡದಂತೆ ಆಗ್ರಹಿಸಲಾಯಿತು.
ಉಳಿಸಿ ಉಳಿಸಿ ಕಪ್ಪತಗುಡ್ಡ ಉಳಿಸಿ ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಯಿತು. ಪ್ರತಿಭಟನೆಯಲ್ಲಿ ರೈತ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು, ಪರಿಸರವಾದಿಗಳು ಸ್ವಾಮೀಜಿಗೆ ಸಾಥ್ ನೀಡಿದರು.
ಕಪ್ಪತಗುಡ್ಡ ಉತ್ತರ ಕರ್ನಾಟಕ ನಾಲ್ಕೈದು ಜಿಲ್ಲೆಗಳ ಪರಿಸರ ಸಮತೋಲನ ಕಾಯುತ್ತೆ. ರಾಜ್ಯ ಸರ್ಕಾರ ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಅನುಮತಿ ನೀಡಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರು ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ಮಾಡೋದನ್ನು ಕೈಬಿಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಸ್ವಾಮೀಜಿಗಳು, ಪರಿಸರವಾದಿಗಳು ಎಚ್ಚರಿಕೆ ನೀಡಿದರು.
PublicNext
21/11/2024 01:58 pm