ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ವಿಳಂಬ ಧೋರಣೆ; ಸೆ. 20ರಂದು ಸಿಎಂ ನಿವಾಸಕ್ಕೆ ಮುತ್ತಿಗೆ

ಅಥಣಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಹಲವು ದಶಕಗಳಿಂದ ಹೋರಾಟ ನಡೆದಿದ್ದರೂ ಸರ್ಕಾರ‌ ಮಾತ್ರ ವಿಳಂಬ ಧೋರಣೆ ಅನುಸರಿಸುತ್ತಾ ಬಂದಿದೆ. ಇದನ್ನು ಖಂಡಿಸಿ ಸೆ. 20ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅಥಣಿ ತಾಲೂಕು ಪಂಚಮಸಾಲಿ ಸಂಘಟನೆ ಅಧ್ಯಕ್ಷ ರಮೇಶ್ ಗೌಡ ಪಾಟೀಲ್ ಹೇಳಿದರು.

ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪಂಚಮಸಾಲಿ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಸಮಾಜ ಶೈಕ್ಷಣಿಕವಾಗಿ ಮುಂದೆ ಬರುವ ದೃಷ್ಟಿಯಿಂದ ಸರ್ಕಾರದಿಂದ 2ಎ ಮೀಸಲಾತಿಯನ್ನು ದಶಕಗಳಿಂದ ಕೇಳುತ್ತಿದ್ದೇವೆ.

ಆದರೆ, ಹಲವು ಮುಖ್ಯಮಂತ್ರಿಗಳು ಭರವಸೆಯನ್ನು ಮಾತ್ರ ನೀಡುತ್ತಿದ್ದಾರೆ. ಇದನ್ನು ಖಂಡಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಅಥಣಿ ತಾಲೂಕಿನಿಂದ 5000ಕ್ಕೂ ಹೆಚ್ಚು ಜನ ತೆರಳುತ್ತಿದ್ದೇವೆ. ಸಮಾಜ ಬಾಂಧವರು ಶಿಗ್ಗಾವಿಗೆ ಬರುವಂತೆ ಕರೆ ನೀಡಿದರು.

ಒಂದು ವೇಳೆ 2ಎ ಮೀಸಲಾತಿ ನೀಡಲು ಇದೇ ರೀತಿ ವಿಳಂಬ ಧೋರಣೆ ಮುಂದುವರೆಸಿದರೆ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ 25 ಲಕ್ಷಕ್ಕೂ ಹೆಚ್ಚು ಸಮಾಜ ಬಾಂಧವರಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. ಅಥಣಿ ಪಂಚಮಸಾಲಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

17/09/2022 10:54 pm

Cinque Terre

44.31 K

Cinque Terre

0

ಸಂಬಂಧಿತ ಸುದ್ದಿ